ಉಡುಪಿ: ಜಿಲ್ಲಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹವಾಮಾನ ಇಲಾಖೆ ನೀಡಿರುವ ರೆಡ್ ಅಲರ್ಟ್ ಮುನ್ಸೂಚನೆ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಮನಗಂಡು ಜೂನ್ 13 (ಶುಕ್ರವಾರ) ರಂದು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪದವಿಪೂರ್ವ ಕಾಲೇಜುಗಳು, ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳು, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಸಂಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.