ಉಡುಪಿ: ಭಾರಿ ಮಳೆ ಹಿನ್ನೆಲೆ ಜೂನ್ 17 (ನಾಳೆ)ಪ್ರಾಥಮಿಕ, ಪ್ರೌಢಶಾಲೆ, ಐಟಿಐ ಪಿಯುಸಿ ಕಾಲೇಜ್ ಗಳಿಗೆ ರಜೆ ಘೋಷಣೆ!

  • 16 Jun 2025 11:15:50 PM


ಉಡುಪಿ: ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ಜೂನ್ 17 ಮಂಗಳವಾರದಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಐಟಿಐ, ಪಿಯುಸಿ ಕಾಲೇಜ್ ಗಳಿಗೆ ರಜೆಯನ್ನು ಘೋಷಿಸಿದ್ದಾರೆ.

 

ಈ ರಜೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ತಿಳಿಸಿದ್ದಾರೆ. ಹೀಗಾಗಿ ಈ ಶಿಕ್ಷಣ ಸಂಸ್ಥೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸಲಿವೆ.

 

 ಜಿಲ್ಲಾಡಳಿತದ ಈ ತೀರ್ಮಾನವು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ತೆಗೆದುಕೊಳ್ಳಲಾಗಿದ್ದು ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.