ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ: ಸರ್ಕಾರದಿಂದ ಮಹತ್ವದ ಘೋಷಣೆ!

  • 11 Jul 2025 04:04:23 PM


ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಪ್ರಮುಖ ನಿರ್ಧಾರವೊಂದನ್ನು ಘೋಷಿಸಿದೆ.

 

 ರಾಜ್ಯದ ಎಲ್ಲಾ ಕರ್ನಾಟಕ ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿಯಿಂದ ಪಿಯುಸಿ ವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಒದಗಿಸಲು ತೀರ್ಮಾನಿಸಿದೆ. 

 

ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆ ಮತ್ತು ಮಕ್ಕಳ ಹಾಜರಾತಿ ಹೆಚ್ಚಿಸುವುದು ಹಾಗೆಯೇ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಸಹಾಕತಿಯಾಗುತ್ತದೆ.

 

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬಡ ಮಕ್ಕಳಿಗೆ ಶೈಕ್ಷಣಿಕ ಹಾಗೂ ಆರ್ಥಿಕ ಸಹಾಯವನ್ನು ನೀಡುವ ಉದ್ದೇಶದಿಂದ ಈ ಉಚಿತ ಸಾರಿಗೆ ವ್ಯವಸ್ಥೆ ಜಾರಿಯಾಗಲಿದೆ ಎಂದು ಹೇಳಿದ್ದಾರೆ.

 

 ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರದ ಈ ಹೆಜ್ಜೆ ಮಹತ್ವಪೂರ್ಣವಾದುದು ಎಂದು ಅವರು ಹೇಳಿದ್ದಾರೆ.