ಪೆರ್ಲ: ಗ್ರಾಮಾಭಿವೃದ್ಧಿ ಯೋಜನೆಯ ಸಂಘದಿಂದ ಮೂರು ಲಕ್ಷ ರೂಪಾಯಿ ಸಾಲ ಪಡೆದುಕೊಂಡು ಹಣ ಪಾವತಿಸದೇ, ಇಬ್ಬರು ಮಕ್ಕಳ ತಾಯಿ ಅನ್ಯಧರ್ಮೀಯ ಯುವಕನೊಂದಿಗೆ ನಾಪತ್ತೆಯಾಗಿರುವ ಘಟನೆ ಪೆರ್ಲ ಬಳಿ ಸಂಭವಿಸಿದೆ..
ಜುಲೈ 1ರಂದು ತನ್ನ ಮೂರುವರೆ ವರ್ಷದ ಮಗುವಿನೊಂದಿಗೆ ಮಹಿಳೆ ನಾಪತ್ತೆಯಾಗಿದ್ದು ಈ ಸಂಬಂಧ ಪತಿ ನೀಡಿದ ದೂರಿನ ಆಧಾರದ ಮೇಲೆ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ.
ಮಹಿಳೆ ಕಳೆದ ಜೂನ್ 1ರಂದೂ ಇದೇ ರೀತಿಯಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದು, ನಂತರ ಪೊಲೀಸರ ಸಹಾಯದಿಂದ ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ಮನೆಗೆ ಮರಳಿದ್ದ ಆಕೆ ಈಗ ಮಲೆಯಾಳಿ ಕ್ರಿಶ್ಚಿಯನ್ ಧರ್ಮದ ಯುವಕನೊಂದಿಗೆ ಪರಾರಿಯಾಗಿರುವುದಾಗಿ ವರದಿಯಾಗಿದೆ.
ಇದೀಗ ಮಹಿಳೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಪೊಲೀಸರು ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ಈ ಸಂಬಂಧವಾಗಿ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.