ಉಡುಪಿ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆ ನೀಡಿರುವ ಹೆಚ್ಚುವರಿ ಮಳೆಯ "ಯೆಲ್ಲೋ ಅಲರ್ಟ್" ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ದಿನಾಂಕ:17.07.2025 ಗುರುವಾರ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದ್ದಾರೆ.
ಜಿಲ್ಲಾಧಿಕಾರಿ ಶ್ರೀಸ್ವರೂಪ ಟಿ.ಕೆ ಅವರು ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಅದೇ ವೇಳೆ, ಜಿಲ್ಲೆಯ ಪದವಿಪೂರ್ವ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐ.ಟಿ.ಐ. ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ರಜೆ ಘೋಷಿಸಲಾಗಿಲ್ಲ ಎಂದು ಸೂಚಿಸಿದ್ದಾರೆ.
ಈ ಹಿನ್ನೆಲೆ ವಿದ್ಯಾರ್ಥಿಗಳು ಹಾಗೂ ಪಾಲಕರು ಸರಿಯಾದ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮ ವಹಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.