ಉಡುಪಿ: ಎಂ ಜಿ ಎಂ ಕಾಲೇಜ್ ಬಳಿ ಭೀಕರ ರಸ್ತೆ ಅಪಘಾತ; ಮಣಿಪಾಲ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ; ರೋಗಿ ಸಾವು

  • 19 Jul 2025 03:39:03 PM


ಉಡುಪಿ:  ಎಂಜಿಎಂ ಕಾಲೇಜು ಬಳಿ  ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಆ್ಯಂಬುಲೆನ್ಸ್‌ ಡಿವೈಡರ್‌ ಬಳಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್ ಡಿಕ್ಕಿ ಹೊಡೆದ ಪರಿಣಾಮ ರೋಗಿಯೊಬ್ಬರು ಮೃತಪಟ್ಟಿರುವ ದುರಂತ ಘಟನೆ ಸಂಭವಿಸಿದೆ.

 

ಕೋಟೇಶ್ವರದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಗೆ ರೋಗಿಯೊಬ್ಬರನ್ನು ಸಾಗಿಸುತ್ತಿದ್ದ ಆ್ಯಂಬುಲೆನ್ಸ್, ಎಂಜಿಎಂ ಕಾಲೇಜು ಡಿವೈಡರ್ನಿ ಬಳಿ ಯಂತ್ರಣ ತಪ್ಪಿ ಬ್ಯಾರಿಕೇಡ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

 

ರೋಗಿಯನ್ನು ತಕ್ಷಣ ಬೇರೆ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು.ಆದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.