ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್: ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 25 ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

  • 24 Jul 2025 08:57:27 PM


ದ. ಕ: ಕರ್ನಾಟಕ ಕರಾವಳಿಯಲ್ಲಿ ನಿರಂತರ ಮಳೆಯ ಅಬ್ಬರ ಹಿನ್ನೆಲೆ, ಭಾರತೀಯ ಹವಾಮಾನ ಇಲಾಖೆ (IMD) ದಕ್ಷಿಣ ಕನ್ನಡ ಜಿಲ್ಲೆಗೆ ಜುಲೈ 25 ರಂದು ರೆಡ್ ಅಲರ್ಟ್ ಘೋಷಿಸಿದೆ.

 

ಜಿಲ್ಲೆಯಲ್ಲಿ ಸಂಭವಿಸಿರುವ ವಿಪರೀತ ಮಳೆ ಹಿನ್ನೆಲೆ, ವಿದ್ಯಾರ್ಥಿಗಳ ಸುರಕ್ಷತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಜುಲೈ 25, 2025 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಜೊತೆಗೆ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.