ಬಂಟ್ವಾಳ: ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ಸಚಿವರಾದ ಪ್ರಹ್ಲಾದ ಜೋಶಿ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಒಡ್ಡೂರು ಫಾರ್ಮ್ಸ್ ನ ಹತ್ತಿರದ ಸಿಎನ್.ಜಿ. ಘಟಕಕ್ಕೆ ಭೇಟಿ ನೀಡಿದರು.
ಈ ಘಟಕದ ಕಾರ್ಯ ಚಟುವಟಿಕೆಗಳನ್ನು ವೀಕ್ಷಿಸಿದ ಬಳಿಕ , ಪ್ರಹ್ಲಾದ ಜೋಶಿ ಅವರು ಇಂತಹ ಉದ್ದಿಮೆಗಳು ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಪೂರಕವಾಗುತ್ತವೆ ಎಂದು ಪ್ರಶಂಸಿಸಿದರು.
ಶಾಸಕ ರಾಜೇಶ್ ನಾಯ್ಕ್ ಮತ್ತು ಉನ್ನತ್ ಆರ್. ನಾಯ್ಕ್ ಅಟೋ ಗ್ಯಾಸ್ ವಿತರಣೆಗೆ ಅನುಕೂಲ ಕಲ್ಪಿಸಲಾಗಿರುವ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಂಗಳೂರು ಉತ್ತರ ಶಾಸಕ ವೈ. ಭರತ್ ಶೆಟ್ಟಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಪ್ರಮುಖರಾದ ಸಂಜಯ್ ಪ್ರಭು, ದೇವದಾಸ್ ಶೆಟ್ಟಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಯತೀಶ್ ಅರ್ವಾರ್, ಸಚಿನ್ ಅಡಪ, ಪವನ್ ಕುಮಾರ್, ರವೀಶ್ ಕಾಮತ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.