ಮುಳಿಯ: ವಿಟ್ಲ ತಾಲೂಕು ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಚಂಡಮಾರುತದ ಪರಿಣಾಮ ಜೋರು ಮಳೆ ಗಾಳಿಗೆ ವಿದ್ಯುತ್ ಕಂಬಕ್ಕೆ ದೊಡ್ಡ ಮರ ಬಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಮರ ಬಿದ್ದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಬಿದ್ದಿದೆ.
ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ನಾಗರಿಕರ ತಕ್ಷಣದ ಪ್ರತಿಕ್ರಿಯೆಯು ದೊಡ್ಡ ಅಪಾಯ ಸಂಭವಿಸುವುದನ್ನು ತಪ್ಪಿಸಿದೆ. ವಿವರವನ್ನು ಅರಿತ ವಿದ್ಯುತ್ ಇಲಾಖೆಯ ಸಿಬ್ಬಂದಿಗಳು ಸಮಯಕ್ಕೆ ಸ್ಪಂದಿಸಿ ಸ್ಥಳಕ್ಕೆ ಧಾವಿಸಿದ್ದಾರೆ.
ಅಧಿಕಾರಿ ಸಿಬ್ಬಂದಿ ತುರ್ತು ದುರಸ್ತಿ ಕಾರ್ಯ ಆರಂಭಿಸಿದ್ದು, ವಿದ್ಯುತ್ ಪುನಃ ಸ್ಥಾಪನೆಗಾಗಿ ಶ್ರಮಿಸುತ್ತಿದ್ದಾರೆ.
ಸುಧಾರಣಾ ಕಾರ್ಯಗಳು ಪೂರ್ಣಗೊಳ್ಳುವವರೆಗೆ ಜನತೆಗೆ ಸಹನಶೀಲತೆಯಿಂದ ಸಹಕರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಸ್ಥಳೀಯರು ಈ ಭಾಗದಲ್ಲಿ ಹಳೆಯ ಮರಗಳನ್ನು ತಕ್ಷಣವೇ ತೆಗೆದುಹಾಕುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.